ಅಜ್ಜಂಪುರ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕು ವ್ಯಾಪ್ತಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಬೀರೂರಿನ ಗುರು ಭವನದಲ್ಲಿ ಹಮ್ಮಿಕೊಂಡಿದ್ದು, ಪುರಸಭೆ ಅಧ್ಯಕ್ಷರಾದ ಶ್ರೀಮತಿ ವನಿತಾ ಮಧು ಬಾವಿಮನೆ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ನಿರ್ದೇಶಕರಾದ ಸದಾನಂದ ಬಂಗೇರ ಸರ್ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಸಲಾಗುವ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಭಾಗ್ಯ ಉಪನ್ಯಾಸಕರು,ಮಕ್ಕಳ ಬೆಳವಣಿಗೆ ಯಲ್ಲಿ ತಾಯಿಯ ಪಾತ್ರ, ಮೊಬೈಲ್ ಬಳಕೆಯ ಅನುಕೂಲತೆ, ದುಷ್ಪರಿಣಾಮಗಳು, ಮನೆಯಲ್ಲಿ ಸಂಸ್ಕೃತಿ ಸಂಸ್ಕಾರದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುರಸಭೆಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಸವಿತಾ ರಮೇಶ್ ರವರು, ಸರಕಾರ ಮಾಡದ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದ್ದು ತಾವೆಲ್ಲರೂ ಈ ಕಾರ್ಯಕ್ರಮದ ಯಶಸ್ವಿಗೆ ಪಾಲ್ಗೊಳ್ಳೋಣ ಎಂದರು.
ತಾಲೂಕಿನ ಯೋಜನಾಧಿಕಾರಿಗಳಾದ ಸಂಜೀವ ಗೌಡ ಸರ್ ಪ್ರಾಸ್ತಾವಿಕ ನುಡಿಯೊಂದಿಗೆ ಸರ್ವರಿಗೂ ಸ್ವಾಗತ ಕೋರಿದರು.
ಬೀರೂರು ಕ್ಷೇತ್ರದ ಮುಖ್ಯ ಶಿಕ್ಷಣಾಧಿಕಾರಿಗಳಾದ ರುದ್ರಪ್ಪ ರವರು ಮಕ್ಕಳ ಶಿಕ್ಷಣದ ಮೌಲ್ಯದ ಬಗ್ಗೆ ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಶ್ರೀಮತಿ ವಸಂತಮ್ಮ ರವರು ಧರ್ಮಸ್ಥಳ ಯೋಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ ತಿಳಿಸಿದರು.,
ಕಾರ್ಯಕ್ರಮದಲ್ಲಿ ಊರಿನ ಗಣ್ಯರು, ವಲಯದ ಮೇಲ್ವಿಚಾರಕರು,ಜ್ಞಾನವಿಕಾಸ ಸಮನ್ವಯ ಅಧಿಕಾರಿ, ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯ ಉಪಸ್ಥಿತರಿದ್ದರು.

ಬಡವರ ಆಶಾಕಿರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ

ಕಡೂರು ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಧರ್ಮಸ್ಥಳ ಸಂಸ್ಥೆಯಿಂದ ಒಂದು ಲಕ್ಷ ಅನುದಾನ

ಧರ್ಮಸ್ಥಳ ಸಂಸ್ಥೆಯಿಂದ ಬತ್ತ ನಾಟಿಯಲ್ಲಿ ಯಾಂತ್ರಿಕರಣ

ಚೈತನ್ಯ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಯಂತ್ರಶ್ರೀ ಕಾರ್ಯಕ್ರಮದಡಿ ಬಿಜೋಪಚಾರ ಮತ್ತು ಮಾಹಿತಿ ಕಾರ್ಯಕ್ರಮ

ಯಂತ್ರಶ್ರೀ ಕಾರ್ಯಕ್ರಮದಡಿ ಬಿಜೋಪಚಾರ ಮತ್ತು ಮಾಹಿತಿ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆರೆಗಳ ಹೊಳೆತ್ತುವ  ಕಾರ್ಯಕ್ರಮ

Skdrdp

ವಿದ್ಯಾರ್ಥಿಗಳ ಜೀವನ ತುಂಬಾ ಅಮೂಲ್ಯವಾದ ಜೀವನ ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ಸಾಲಿನಂತೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪರಿಸರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮ ಕ್ಕೆ ಅರಣ್ಯ ಇಲಾಖೆ ಅಧಿಕಾರಿ DYRF ಭೇಟಿ ನೀಡಿ ಮಾತನಾಡಿದರು.

ಭದ್ರಾವತಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಮನೆಗೊಂದು ಗಿಡ ಉರಿಗೊಂದು ವನ

ಭದ್ರಾವತಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಮನೆಗೊಂದು ಗಿಡ ಉರಿಗೊಂದು ವನ

Leave a Reply

Your email address will not be published. Required fields are marked *