ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕು ವ್ಯಾಪ್ತಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಬೀರೂರಿನ ಗುರು ಭವನದಲ್ಲಿ ಹಮ್ಮಿಕೊಂಡಿದ್ದು, ಪುರಸಭೆ ಅಧ್ಯಕ್ಷರಾದ ಶ್ರೀಮತಿ ವನಿತಾ ಮಧು ಬಾವಿಮನೆ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ನಿರ್ದೇಶಕರಾದ ಸದಾನಂದ ಬಂಗೇರ ಸರ್ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಸಲಾಗುವ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಶ್ರೀಮತಿ ಭಾಗ್ಯ ಉಪನ್ಯಾಸಕರು,ಮಕ್ಕಳ ಬೆಳವಣಿಗೆ ಯಲ್ಲಿ ತಾಯಿಯ ಪಾತ್ರ, ಮೊಬೈಲ್ ಬಳಕೆಯ ಅನುಕೂಲತೆ, ದುಷ್ಪರಿಣಾಮಗಳು, ಮನೆಯಲ್ಲಿ ಸಂಸ್ಕೃತಿ ಸಂಸ್ಕಾರದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುರಸಭೆಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಸವಿತಾ ರಮೇಶ್ ರವರು, ಸರಕಾರ ಮಾಡದ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದ್ದು ತಾವೆಲ್ಲರೂ ಈ ಕಾರ್ಯಕ್ರಮದ ಯಶಸ್ವಿಗೆ ಪಾಲ್ಗೊಳ್ಳೋಣ ಎಂದರು.
ತಾಲೂಕಿನ ಯೋಜನಾಧಿಕಾರಿಗಳಾದ ಸಂಜೀವ ಗೌಡ ಸರ್ ಪ್ರಾಸ್ತಾವಿಕ ನುಡಿಯೊಂದಿಗೆ ಸರ್ವರಿಗೂ ಸ್ವಾಗತ ಕೋರಿದರು.
ಬೀರೂರು ಕ್ಷೇತ್ರದ ಮುಖ್ಯ ಶಿಕ್ಷಣಾಧಿಕಾರಿಗಳಾದ ರುದ್ರಪ್ಪ ರವರು ಮಕ್ಕಳ ಶಿಕ್ಷಣದ ಮೌಲ್ಯದ ಬಗ್ಗೆ ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಶ್ರೀಮತಿ ವಸಂತಮ್ಮ ರವರು ಧರ್ಮಸ್ಥಳ ಯೋಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ ತಿಳಿಸಿದರು.,
ಕಾರ್ಯಕ್ರಮದಲ್ಲಿ ಊರಿನ ಗಣ್ಯರು, ವಲಯದ ಮೇಲ್ವಿಚಾರಕರು,ಜ್ಞಾನವಿಕಾಸ ಸಮನ್ವಯ ಅಧಿಕಾರಿ, ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯ ಉಪಸ್ಥಿತರಿದ್ದರು.
©2024 The Karnataka Xpress WordPress Video Theme by WPEnjoy