ಈ ದಿನ ಭದ್ರಾವತಿ 1, ತಾಲೂಕಿನ ಅಂತರಗಂಗೆ ವಲಯದ, ಕೋಮಾರನಹಳ್ಳಿ ಕಾರ್ಯ ಕ್ಷೇತ್ರದ, ಚೈತನ್ಯ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು, ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ನಂದಿನಿ ಬಾಯಿ, ಗ್ರಾಮ ಪಂಚಾಯತ್ ಪಿ ಡಿ ಓ, ಕೇಶವಮೂರ್ತಿ, ಶಿಕ್ಷಕರಾದ ಶ್ರೀಮತಿ ಚನ್ನಮ್ಮ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಂಕುಬಾಯಿ, ತಾಲೂಕಿನ ಯೋಜನಾಧಿಕಾರಿಗಳಾದ ಪ್ರಕಾಶ್ ವೈ, ರವರು ದೀಪ ಬೆಳಗಿಸುವುದರ ಮೂಲಕ ನಡೆಸಿದರು, ಜ್ಞಾನ ವಿಕಾಸ ಕಾರ್ಯಕ್ರಮದಿಂದ ಮಹಿಳೆಯರು ಸಾಕಷ್ಟು ತಿಳುವಳಿಕೆಯನ್ನು ಪಡೆದುಕೊಂಡು ಆರ್ಥಿಕ ಅಭಿವೃದ್ಧಿಯನ್ನು ಹೊಂದುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಶಿಕ್ಷಕಿ ಚೆನ್ನಮ್ಮ ರವರು ತಿಳಿಸಿದರು, ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ, ಹಾಗೂ ಪುಷ್ಪಗುಚ್ಛ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು, ಕೇಂದ್ರ ಸದಸ್ಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು, ಕೇಂದ್ರದ ಸದಸ್ಯರುಉತ್ತಮ ವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು.